
ಚಿಕ್ಕಮಗಳೂರಿನ ಟಿಪ್ಪು ಕಾಲೋನಿಯಲ್ಲಿ ಅಳವಡಿಸಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ಗೆ ಪಾಕಿಸ್ತಾನದ ಹಾಡು ಬಳಸಿ ವಿಡಿಯೋ ಮಾಡಿದ ಆರೋಪದ ಮೇಲೆ ರೋಷನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತಂದ ಆರೋಪದಡಿ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು ಈ ಕೃತ್ಯವನ್ನು ದೇಶದ್ರೋಹ ಎಂದು ಕರೆದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.