
ಮೈಸೂರಿನಲ್ಲಿ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಹೇಳದೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದ್ದು, ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ಉಚಿತ ವ್ಯವಸ್ಥೆ ಕಲ್ಪಿಸುವುದಾಗಿ ಅವರು ತಿಳಿಸಿದ್ದಾರೆ.
ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಇನ್‌ಸ್ಪೆಕ್ಟರ್ ಧನಂಜಯ ಅವರ ಹೇಳಿಕೆಯನ್ನು ಖಂಡಿಸಿ ಪ್ರತಾಪ್ ಸಿಂಹ ಅವರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.