
ಅಕ್ಟೋಬರ್ 1ರಿಂದ ಡಿಸೆಂಬರ್ 31ರವರೆಗಿನ 2026-27ರ ಹಣಕಾಸು ವರ್ಷದ ಮೂರನೇ ಕ್ವಾರ್ಟರ್ಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಕೇಂದ್ರ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ.
ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಆರ್ಥಿಕ ವ್ಯವಹಾರಗಳ ಇಲಾಖೆಯು ಹಿಂದಿನ ತ್ರೈಮಾಸಿಕದ ಬಡ್ಡಿ ದರಗಳನ್ನೇ ಮುಂದುವರಿಸಲು ನಿರ್ಧರಿಸಿದೆ.
ಸುಕನ್ಯಾ ಸಮೃದ್ಧಿ ಯೋಜನೆ ಹಾಗೂ ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಿಗೆ ಗರಿಷ್ಠ ಶೇ. 8.2ರಷ್ಟು ಬಡ್ಡಿ ದರ ಮುಂದುವರಿಯಲಿದೆ.