
ನೊಯ್ಡಾದ ಕುಖ್ಯಾತ ನಿಥಾರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿದ್ದು ಇತ್ತೀಚೆಗೆ ಸುಪ್ರೀಂ ಕೋರ್ಟ್ನಿಂದ ಖುಲಾಸೆಗೊಂಡಿದ್ದ ಸುರೇಂದ್ರ ಕೋಲಿ, ಉತ್ತರಾಖಂಡದ ಹರಿದ್ವಾರದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಹರಿದ್ವಾರದ ಸಪ್ತ ಸರೋವರ್ ರಸ್ತೆಯಲ್ಲಿರುವ ಟೀ ಸ್ಟಾಲ್ ಒಂದರಲ್ಲಿ ಶುಕ್ರವಾರ ಬೆಳಿಗ್ಗೆ ಆತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.
2025ರ ನವೆಂಬರ್ 11ರಂದು ಸುಪ್ರೀಂ ಕೋರ್ಟ್ ಕ್ಯುರೇಟಿವ್ ಅರ್ಜಿಯನ್ನು ಪುರಸ್ಕರಿಸಿ ಆತನನ್ನು ಕೊನೆಯ ಪ್ರಕರಣದಲ್ಲೂ ದೋಷಮುಕ್ತಗೊಳಿಸಿತ್ತು.