
ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯ ಭರ್ತಿಯಾಗುವ ಹಂತ ತಲುಪಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಕಾವೇರಿ ನೀರಾವರಿ ನಿಗಮವು 8,000 ದಿಂದ 10,000 ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನದಿಯ ಎರಡೂ ದಂಡೆಗಳಲ್ಲಿ ವಾಸಿಸುವ ಜನರು ತಮ್ಮ ಜಾನುವಾರು ಮತ್ತು ಆಸ್ತಿ-ಪಾಸ್ತಿಯ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.