
ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ ನೀಡಿತು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಜ್ಯ ಘಟಕವು ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ನಡೆಸಿದೆ.