
ಸರ್ಕಾರದ ಅನುದಾನ ಬಿಡುಗಡೆಯಾಗದಿದ್ದಕ್ಕೆ ನೊಂದು ಕಳೆದ 18 ದಿನಗಳಿಂದ ಗೂಢವಾಗಿ ನಾಪತ್ತೆಯಾಗಿದ್ದ ಗದಗ ಕೆಆರ್ಐಡಿಎಲ್ ಎಇಇ ಪರ್ವೀಜ್ ಅವರು ಮಧ್ಯಪ್ರದೇಶದ ಭೋಪಾಲ್ ರೈಲ್ವೇ ನಿಲ್ದಾಣದ ಸಿಸಿಟಿವಿ ಕ್ಯಾಮರಾದಲ್ಲಿ ಪ್ರತ್ಯಕ್ಷರಾಗಿದ್ದಾರೆ.
ಆಂಧ್ರಪ್ರದೇಶದ ವಿಜಯವಾಡದಲ್ಲಿದ್ದ ಅವರ ಕೊನೆಯ ಮೊಬೈಲ್ ನೆಟ್ವರ್ಕ್ ಲೋಕೇಷನ್ ಪತ್ತೆಯಾದ ಬಳಿಕ, ಜಾಡು ಪತ್ತೆಯಾಗಬಾರದೆಂದು ಅವರು ಮೊಬೈಲ್ ಫೋನ್ ಸಂಪೂರ್ಣ ಆಫ್ ಮಾಡಿಕೊಂಡಿದ್ದರು.
gadag ಪೊಲೀಸರು ಸುಮಾರು 1,200 ಕಿಲೋಮೀಟರ್ ವ್ಯಾಪ್ತಿಯ ನಿರಂತರ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಅವರ ಪ್ರಯಾಣದ ಹಾದಿಯನ್ನು ಭೇದಿಸಿದ್ದು, ಶೀಘ್ರದಲ್ಲೇ ಅವರನ್ನು ವಶಕ್ಕೆ ಪಡೆಯುವ ನಿರೀಕ್ಷೆಯಿದೆ.