
ಜಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಲಾಠಿಚಾರ್ಜ್ ಕುರಿತು ಮೌನ ವಹಿಸಿರುವ ಹಿರಿಯ ನಟ ನಸೀರುದ್ದೀನ್ ಶಾ ವಿರುದ್ಧ ಸಂಸದೆ ಕಂಗನಾ ರನೌತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿದ್ಯಾರ್ಥಿ ಪ್ರತಿಭಟನೆಗಳ ಬಗ್ಗೆ ಈ ಹಿಂದೆ ಮಾತನಾಡಿದ್ದ ನಸೀರುದ್ದೀನ್ ಶಾ, 'ಬಾಯಿಯಲ್ಲಿ ಮೂಳೆ ಹಿಡಿದಿರುವ ನಾಯಿಗೆ ಬೊಗಳಲು ಸಾಧ್ಯವಿಲ್ಲ' ಎಂದು ಹೇಳಿದ್ದಕ್ಕೆ ಕಂಗನಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್ ವಿಧಾನಸಭೆ ಬಳಿ ಸೋಮವಾರ ನಡೆದ ಘರ್ಷಣೆಯಲ್ಲಿ ಹಲವು ಪ್ರತಿಭಟನಾಕಾರರು ಮತ್ತು ನಾಲ್ವರು ಪೊಲೀಸರು ಗಾಯಗೊಂಡಿದ್ದು, ನಸೀರುದ್ದೀನ್ ಶಾ ನೆರೆಯ ದೇಶಕ್ಕಾಗಿ ಹೋರಾಡುತ್ತಾರೆ ಎಂದು ಕಂಗನಾ ಆರೋಪಿಸಿದ್ದಾರೆ.