
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿದ ಅರ್ಜಿಯನ್ನು ಪ್ರಶ್ನಿಸಿ ನಟ ದರ್ಶನ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಮಾಫಿ ಸಾಕ್ಷಿಯನ್ನು ಆಕ್ಷೇಪಿಸಲು ಸಹ-ಆರೋಪಿಗೆ ಹಕ್ಕಿಲ್ಲ ಎಂದು ಅಭಿಪ್ರಾಯಪಟ್ಟು 59ನೇ ಸಿಸಿಹೆಚ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.
ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ಮಾಫಿ ಸಾಕ್ಷಿಯಾಗಲು ನಿರ್ಧರಿಸಿರುವುದರಿಂದ, ಈ ಬೆಳವಣಿಗೆಯು ದರ್ಶನ್ ಅವರಿಗೆ ಕಾನೂನಿನ ಸಂಕಷ್ಟವನ್ನು ಹೆಚ್ಚಿಸಿದೆ.