
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಧರ್ಮೇಂದ್ರ ಪ್ರಧಾನ್ ಸೋಮವಾರ ಲೋಕಸಭೆಗೆ ಆಗಮಿಸಿದರು.
ಸದನಕ್ಕೆ ಪ್ರವೇಶಿಸುತ್ತಿದ್ದಂತೆ ಬಿಜೆಪಿ ಮತ್ತು ಎನ್ಡಿಎ ಮೈತ್ರಿಕೂಟದ ಸಂಸದರು ಪ್ರಧಾನ್ ಅವರ ನಿರ್ಧಾರವನ್ನು ಶ್ಲಾಘಿಸಿ ಜೈಕಾರ ಕೂಗುವ ಮೂಲಕ ಸ್ವಾಗತಿಸಿದರು.
ಜುಲೈ 25 ರಂದು ರಾಜೀನಾಮೆ ನೀಡಿದ್ದ ಪ್ರಧಾನ್, ದೇಶದ ಯುವಶಕ್ತಿ ಗೊಂದಲಕ್ಕೆ ಸಿಲುಕಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾಗಿ ಸ್ಪಷ್ಟಪಡಿಸಿದ್ದರು.