
ಬ್ರಿಕ್ಸ್ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ನವದೆಹಲಿಯಲ್ಲಿ ಸುಮಾರು 50 ನಿಮಿಷಗಳ ಕಾಲ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ದ್ವಿಪಕ್ಷೀಯ ಬಾಂಧವ್ಯದ ಅಭಿವೃದ್ಧಿಗೆ ಗಡಿಯಲ್ಲಿ ಶಾಂತಿ ಕಾಯ್ದುಕೊಳ್ಳುವುದು ಪ್ರಾಥಮಿಕ ಅಗತ್ಯ ಎಂದು ಪ್ರಧಾನಿ ಮೋದಿ ಒತ್ತಿಹೇಳಿದ್ದಾರೆ.
ಗಡಿ ಸಮಸ್ಯೆಗೆ ನ್ಯಾಯಸಮ್ಮತ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಲು ಹಾಗೂ ಭಿನ್ನಾಭಿಪ್ರಾಯಗಳಿಗೆ ವಿವಾದಗಳಾಗಲು ಆಸ್ಪದ ನೀಡಬಾರದು ಎಂದು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ.