
ಚೀನಾದ ಹುಲುನ್‌ಬುಯಿರ್‌ನಲ್ಲಿ ನಡೆದ 2026ರ AHF ಮಹಿಳಾ ಜೂನಿಯರ್ ಹಾಕಿ ಏಷ್ಯಾಕಪ್ ಫೈನಲ್‌ನಲ್ಲಿ ಆತಿಥೇಯ ಚೀನಾವನ್ನು 1-0 ಗೋಲುಗಳಿಂದ ಮಣಿಸಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಿದೆ.
ಪಂದ್ಯದ 17ನೇ ನಿಮಿಷದಲ್ಲಿ ಸ್ಟ್ರೈಕರ್ ಸಾನಿಕಾ ಚಂದ್ರಕಾಂತ್ ಮಾನೆ ಫೀಲ್ಡ್ ಗೋಲು ದಾಖಲಿಸಿ ಭಾರತದ ಗೆಲುವಿಗೆ ಪ್ರಮುಖ ಕಾರಣರಾದರು.
ಈ ಐತಿಹಾಸಿಕ ವಿಜಯದೊಂದಿಗೆ ಸತತ ಮೂರನೇ ಬಾರಿಗೆ ಏಷ್ಯಾಕಪ್ ಗೆದ್ದುಕೊಂಡಿರುವ ಭಾರತ ತಂಡವು ಮುಂಬರುವ FIH ಜೂನಿಯರ್ ಮಹಿಳಾ ಹಾಕಿ ವಿಶ್ವಕಪ್‌ಗೆ ಅರ್ಹತೆ ಪಡೆದಿದೆ.