
ರಾಜ್ಯದ ಕಾರಾಗೃಹಗಳಲ್ಲಿ ಭದ್ರತೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು AI ಆಧಾರಿತ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಪೋರ್ಟಬಲ್ ಸಿಗ್ನಲ್ ಜಾಮರ್‌ಗಳನ್ನು ಅಳವಡಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೈದಿಗಳ ದೂರವಾಣಿ ಕರೆ ವ್ಯವಸ್ಥೆಯನ್ನು ಸಹ ಆಧುನೀಕರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಒಟ್ಟು 29 ಮಂದಿ ಕೈದಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಲು ಸಹ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.