ಮಲ್ಲಿಕಾರ್ಜುನ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ನಿಯಮಬಾಹಿರವಾಗಿ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬಿಟಿಎಂ ಲೇಔಟ್ನಲ್ಲಿ ಎರಡು ಎಕರೆ ನಿವೇಶನವನ್ನು ಪರಿಶಿಷ್ಟ ಜಾತಿಯ ಟ್ರಸ್ಟ್ ಎಂದು ಉಲ್ಲೇಖಿಸಿ ಮಂಜೂರು ಮಾಡಲಾಗಿದೆ ಎಂಬುದು ದೂರಿನ ಸಾರಾಂಶವಾಗಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಿದೆ.