
ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.
ರೈತರ ಬೆಳೆ ಹಾನಿ ಮತ್ತು ನೀರಿನ ಲಭ್ಯತೆಯ ಕುರಿತು ಕಂದಾಯ ಇಲಾಖೆಯ ಮೂಲಕ ಕೇಂದ್ರಕ್ಕೆ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ತಿಂಗಳ ಕೊನೆಯವರೆಗೆ ಕಾಯುವಂತೆ ಸೂಚಿಸಿರುವ ಸಚಿವರು, ಬಳಿಕ ಬರ ಘೋಷಣೆ ಮಾಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.