
ರಾಜ್ಯದಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆ ಮತ್ತು ಅಕ್ರಮ ಸಂಗ್ರಹಣೆ ವಿರುದ್ಧ ಆಹಾರ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ.
ಕಳೆದ ಎರಡು ತಿಂಗಳಲ್ಲಿ 18 ಲಕ್ಷ ಕೆಜಿಗೂ ಹೆಚ್ಚು ಅಕ್ಕಿ ಹಾಗೂ 250ಕ್ಕೂ ಹೆಚ್ಚು ಟ್ರಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ಕಿ ಸಂಗ್ರಹಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.