
ಹೊಸಕೋಟೆಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಸೆಪ್ಟೆಂಬರ್ 17ರಿಂದ 13 ದಿನಗಳ ಕಾಲ ಕುರಿ ಸಾಕಾಣಿಕೆ ಕುರಿತು ಉಚಿತ ತರಬೇತಿ ಶಿಬಿರವನ್ನು ಆಯೋಜಿಸಿದೆ.
18ರಿಂದ 49 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಈ ಶಿಬಿರದಲ್ಲಿ ಭಾಗವಹಿಸಬಹುದು, ಬಿಪಿಎಲ್ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಸಕ್ತರು ಸೆಪ್ಟೆಂಬರ್ 12ರಂದು ಬೆಳಗ್ಗೆ 10 ಗಂಟೆಗೆ ದಾಖಲೆಗಳೊಂದಿಗೆ ನೇರವಾಗಿ ಹಾಜರಾಗಬೇಕು; ಹೆಚ್ಚಿನ ಮಾಹಿತಿಗಾಗಿ 8970476050 ಸಂಖ್ಯೆಯನ್ನು ಸಂಪರ್ಕಿಸಬಹುದು.