
ಹಿಂದಿನ ವೈಎಸ್ಆರ್ಸಿಪಿ ಸರ್ಕಾರವು ಸ್ಥಳೀಯ ಸಂಸ್ಥೆಗಳ ಅನುದಾನ ದುರುಪಯೋಗಪಡಿಸಿಕೊಂಡು, ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸಿದೆ ಮತ್ತು ಕೇಂದ್ರದ ಯೋಜನೆಗಳಿಗೆ ತಡೆ ಒಡ್ಡಿದೆ ಎಂದು ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ 86 ಲಕ್ಷ ಮೆಟ್ರಿಕ್ ಟನ್ ಲೆಗಸಿ ತ್ಯಾಜ್ಯ ರಾಶಿ ಬಿದ್ದಿದ್ದು, ಸ್ಥಗಿತಗೊಂಡಿರುವ ವೇಸ್ಟ್-ಟು-ಎನರ್ಜಿ ಸೇರಿದಂತೆ ಅಭಿವೃದ್ಧಿ ಯೋಜನೆಗಳಿಗೆ ತಮ್ಮ ಸರ್ಕಾರ ಮರುಜೀವ ನೀಡುತ್ತಿದೆ ಎಂದು ಅವರು ತಿಳಿಸಿದರು.
ತಳಮಟ್ಟದ ಅಭಿವೃದ್ಧಿ ಸುಗಮವಾಗಿಾಗಲು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದರು.