
ಹಾಸನದಲ್ಲಿ ಹಾಸನಾಂಬೆಯ ಸಾರ್ವಜನಿಕ ದರ್ಶನೋತ್ಸವವು ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಅಧಿಕೃತವಾಗಿ ಆರಂಭವಾಗಿದ್ದು, ಮೊದಲ ದಿನವೇ ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದಾರೆ.
ದೇವಾಲಯದ ಆವರಣದಲ್ಲಿ ರಾತ್ರಿಯಿಂದಲೇ ಚಳಿಯನ್ನು ಲೆಕ್ಕಿಸದೆ ಭಕ್ತರು ಕಾತರದಿಂದ ಕಾಯುತ್ತಿದ್ದು, ಸುಗಮ ದರ್ಶನಕ್ಕಾಗಿ ಆಡಳಿತ ಮಂಡಳಿ ವ್ಯಾಪಕ ಸಿದ್ಧತೆ ಹಾಗೂ ಪೊಲೀಸ್ ಬಂದೋಬಸ್ತ್ ಕಲ್ಪಿಸಿದೆ.
ನವೆಂಬರ್ 10ರವರೆಗೆ ದರ್ಶನಕ್ಕೆ ಅವಕಾಶವಿದ್ದು, ಶನಿವಾರ ಬೆಳಿಗ್ಗೆ 6 ಗಂಟೆಯಿಂದ ದಿನದ 24 ಗಂಟೆಗಳ ಕಾಲವೂ ಭಕ್ತರಿಗೆ ದೇವಿಯ ದರ್ಶನ ಸಿಗಲಿದೆ.