
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಾಳಿಯಲ್ಲಿ ಪ್ರಜ್ವಲ್ ರೇವಣ್ಣ ಬ್ಯಾರಕ್ ಸೇರಿದಂತೆ ವಿವಿಧೆಡೆ 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿವೆ.
ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣರನ್ನು ಅಮಾನತುಗೊಳಿಸಲಾಗಿದ್ದು, ಎಸ್.ಪಿ ಅನ್ಶುಕುಮಾರ್‌ಗೆ ನೋಟಿಸ್ ನೀಡಿ ಮಾಹಿತಿ ಕೇಳಲಾಗಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣನ ಮೊಬೈಲ್‌ನಲ್ಲಿ ಒಟಿಟಿ ಆ್ಯಪ್‌ಗಳು ಪತ್ತೆಯಾಗಿದ್ದು, ಜೈಲಿನ ವೈಫೈ ಬಳಕೆ ಆಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕಾರಾಗೃಹ ಇಲಾಖೆ ತಿಳಿಸಿದೆ.