
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದ ಬಳಿ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳಿಂದ ಕಾವೇರಿ ಆರತಿ ಕಾರ್ಯಕ್ರಮ ಜರುಗಿತು.
ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿ ಕಾವೇರಿ ಮಾತೆಗೆ ವಿಶೇಷ ಪೂಜೆ ಹಾಗೂ ಆರತಿಯನ್ನು ಸಲ್ಲಿಸಲಾಯಿತು.
ಈ ಕಾರ್ಯಕ್ರಮದ ಮೂಲಕ ನದಿ ನೀರು ಸಂರಕ್ಷಣೆ, ನದಿ ಸ್ವಚ್ಛತೆ ಮತ್ತು ಪರಿಸರ ಜಾಗೃತಿಯ ಮಹತ್ವವನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಯಿತು.