
ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದ ಜಟಣಿಯಲ್ಲಿ 169 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಆರ್ಬಿಐನ ನೂತನ ಡೇಟಾ ಸೆಂಟರ್ ಮತ್ತು ಸೈಬರ್ ಸೆಕ್ಯುರಿಟಿ ತರಬೇತಿ ಸಂಸ್ಥೆಯನ್ನು ಉದ್ಘಾಟಿಸಿದ್ದಾರೆ.
ಭಾರತದ ಡಿಜಿಟಲ್ ಹಣಕಾಸು ವ್ಯವಸ್ಥೆ ಮತ್ತು ಸೈಬರ್ ಭದ್ರತಾ ಸಾಮರ್ಥ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕೇಂದ್ರ ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ನೈಸರ್ಗಿಕ ವಿಕೋಪಗಳಿಂದ ಡೇಟಾಗೆ ಹಾನಿಯಾಗದಂತೆ ಭೂಕಂಪನ ರಹಿತ ಹಾಗೂ ಅಂತರರಾಷ್ಟ್ರೀಯ ಗಡಿಗಳಿಂದ ದೂರವಿರುವ ಭೌಗೋಳಿಕವಾಗಿ ಸುರಕ್ಷಿತ ಪ್ರದೇಶದಲ್ಲಿ ಈ ಕೇಂದ್ರವನ್ನು ವಿನ್ಯಾಸಗೊಳಿಸಲಾಗಿದೆ.