
ಬೆಂಗಳೂರಿನಲ್ಲಿ ನಡೆದ ಹಿಂದುಳಿದ ಜಾತಿಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಿದ್ದರಾಮಯ್ಯ ಅವರಂತಹ ವಿಭಿನ್ನ ನಾಯಕ ಸಿಗಲು ಸಾಧ್ಯವಿಲ್ಲ ಎಂದು ಶ್ಲಾಘಿಸಿದ್ದಾರೆ.
ಸಿದ್ದರಾಮಯ್ಯ ಅವರು ಅಹಿಂದ ಹೋರಾಟದ ಮೂಲಕ ಧ್ವನಿ ಇಲ್ಲದ ಸಮುದಾಯಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರ ಆಡಳಿತ ಶೈಲಿಯನ್ನು ಇತರ ರಾಜ್ಯಗಳು ಮತ್ತು ಪ್ರಧಾನಿ ಮೋದಿಯವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.