
ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ಕರ್ನಾಟಕದಲ್ಲಿ ಒಟ್ಟು 1,603 ಕಿ.ಮೀ. ಹೆದ್ದಾರಿ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, ಈ ಪೈಕಿ 1,269 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಭೂಸ್ವಾಧೀನ ವಿಳಂಬ, ಕಳಪೆ ಗುತ್ತಿಗೆದಾರರ ಕಾರ್ಯಕ್ಷಮತೆ ಮತ್ತು ಕೋವಿಡ್-19 ಸಾಂಕ್ರಾಮಿಕದಂತಹ ಸವಾಲುಗಳಿಂದಾಗಿ ಬಾಕಿ ಉಳಿದಿರುವ 334 ಕಿ.ಮೀ. ಕಾಮಗಾರಿಯನ್ನು 2028-29ರ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ದೇಶದಲ್ಲಿ ರಸ್ತೆ ಅಪಘಾತಗಳಿಂದ ಪ್ರತಿವರ್ಷ ಸುಮಾರು 1,80,000 ಜನರು ಪ್ರಾಣ ಕಳೆದುಕೊಳ್ಳುತ್ತಿದ್ದು, ಚಾಲಕರಿಗೆ ವೈಜ್ಞಾನಿಕ ತರಬೇತಿ ಮತ್ತು ಲೇನ್ ಶಿಸ್ತು ಕಡ್ಡಾಯಗೊಳಿಸುವ ಅಗತ್ಯವಿದೆ ಎಂದು ಸಚಿವರು ರಾಜ್ಯಸಭೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.