
ಪ್ರಜಾ ಪ್ರತಿನಿಧಿ ಕಾಯ್ದೆಯ ಉಲ್ಲಂಘನೆ ಮತ್ತು ಕರ್ತವ್ಯ ಲೋಪದ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಸಿಇಸಿ ಅನುಮೋದಿಸಿದ ನಿರ್ಧಾರಗಳು, ನಿರ್ದೇಶನಗಳು ಮತ್ತು ಸಾಫ್ಟ್ವೇರ್ ಮಾರ್ಪಾಡುಗಳನ್ನು ಅಸಾಂವಿಧಾನಿಕ ಮತ್ತು ಅಸಿಂಧು ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರ ಹೆಸರುಗಳನ್ನು ಅಳಿಸಿರುವ ಬಗ್ಗೆ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿದೆ.