
ಚಿಕ್ಕಮಗಳೂರಿನ ಹೆಬ್ಬೂರು ಸಮೀಪದ ಹೊಳೆಯಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಸೇತುವೆ ದಾಟಲು ಪ್ರಯತ್ನಿಸಿದ ಕಾರು ನೀರಿನಲ್ಲಿ ಮುಳುಗಡೆಯಾಗಿದ್ದು, ಸ್ಥಳೀಯರು ಕುಟುಂಬದ 6 ಮಂದಿಯನ್ನು ರಕ್ಷಿಸಿದ್ದಾರೆ.
ಹೊನ್ನಾವರ ಮೂಲದ ಕುಟುಂಬವು ನಾಬ್ಳ-ಬೆಳ್ಳೂರು-ಶೃಂಗೇರಿ ಸಂಪರ್ಕಿಸುವ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನೀರಿನ ಮಟ್ಟ ಹೆಚ್ಚಳದಿಂದಾಗಿ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡಚಣೆಯಾಗಿದೆ.