
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬೈರಂಬೇ ಪ್ರೌಢಶಾಲಾ ವಿದ್ಯಾರ್ಥಿಗಳು ಬೇಡ್ತಿ ನದಿ ತಿರುವು ಯೋಜನೆ ವಿರೋಧಿಸಿ ಸ್ವಯಂ ಪ್ರೇರಣೆಯಿಂದ ಪತ್ರ ಚಳುವಳಿ ಪ್ರಾರಂಭಿಸಿದ್ದಾರೆ.
ವಿದ್ಯಾರ್ಥಿಗಳು ರಾಜ್ಯದ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕನ್ನಡದಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ 200ಕ್ಕೂ ಹೆಚ್ಚು ಪತ್ರಗಳನ್ನು ಅಂಚೆ ಮೂಲಕ ರವಾನಿಸಿದ್ದಾರೆ.
ಈ ಪತ್ರ ಚಳುವಳಿಗೆ ಭಾರತೀಯ ಕಿಸಾನ್ ಸಂಘದ ಸಂಚಾಲಕ ನರಸಿಂಹಮೂರ್ತಿ ಸಹಕರಿಸಿದ್ದಾರೆ.