
ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹುಟ್ಟುವ ಜೀವನಾಡಿ ತುಂಗಾ ನದಿಯ ಹರಿವು ವಾಡಿಕೆಯಷ್ಟು ಮಳೆಯಾಗದ ಕಾರಣ ಸಂಪೂರ್ಣ ಕ್ಷೀಣಿಸಿದ್ದು, ಬರಿದಾಗುವ ಭೀತಿ ಎದುರಾಗಿದೆ.
ನದಿಯನ್ನೇ ನಂಬಿಕೊಂಡಿರುವ ಲಕ್ಷಾಂತರ ಮಂದಿಗೆ ಕುಡಿಯುವ ನೀರು ಮತ್ತು ಕೃಷಿಗೆ ತೀವ್ರ ಸಂಕಷ್ಟ ಎದುರಾಗುವ ಆತಂಕ ಸೃಷ್ಟಿಯಾಗಿದೆ.
ಇದೇ ಪರಿಸ್ಥಿತಿ ಮುಂದುವರಿದರೆ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೂ ನೀರಿನ ಅಭಾವ ಎದುರಾಗುವ ಸಾಧ್ಯತೆಯಿದೆ.