
ಯಶ್ ಅಭಿನಯದ ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ, ನಟಿ ರಾಧಿಕಾ ಪಂಡಿತ್ ರಾವಣನ ಬೃಹತ್ ಪ್ರತಿಮೆಯ ಮುಂದೆ ನಿಂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೋಟೋದಲ್ಲಿ ರಾಧಿಕಾ ಪಂಡಿತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ‘ಗೊತ್ತಿರೋರಿಗೆ ಮಾತ್ರ ಗೊತ್ತು’ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಯಶ್ ರಾವಣನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಜುಲೈ 30 ರಂದು ಬಿಡುಗಡೆಯಾಗಿದ್ದು, ಅಭಿಮಾನಿಗಳು ರಾಧಿಕಾ ಅವರನ್ನು ‘ಮಂಡೋದರಿ’ ಎಂದು ಕಮೆಂಟ್ ಮಾಡುತ್ತಿದ್ದಾರೆ.