
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಅಂತಿಮ ದಿನವಾದ ಆಗಸ್ಟ್ 27 ರಂದು ಕೊಲಂಬೊದಲ್ಲಿ ದಿನವಿಡೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಯುವೆದರ್ ಪ್ರಕಾರ, ಬೆಳಿಗ್ಗೆ 7 ಗಂಟೆಗೆ ಶೇ. 63 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಶೇ. 80 ಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.
ನಾಲ್ಕನೇ ದಿನದಾಟದಂತ್ಯಕ್ಕೆ ಶ್ರೀಲಂಕಾ 6 ವಿಕೆಟ್‌ಗೆ 229 ರನ್ ಗಳಿಸಿ ಕೇವಲ 16 ರನ್‌ಗಳ ಮುನ್ನಡೆ ಸಾಧಿಸಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಲ್ಲಿರುವ ಭಾರತಕ್ಕೆ ಈ ಗೆಲುವು ಅತ್ಯಗತ್ಯವಾಗಿದೆ.