
ಲೆಗ್ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಇಂಗ್ಲೆಂಡ್ ದೇಶೀಯ ಏಕದಿನ ಕಪ್ನಲ್ಲಿ ನಾರ್ಥಾಂಪ್ಟನ್ಶೈರ್ ತಂಡದ ಪರ ಆಡಿ 7 ಪಂದ್ಯಗಳಲ್ಲಿ 15 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದಾರೆ.
ಸೋಮರ್ಸೆಟ್ ವಿರುದ್ಧದ ಪಂದ್ಯದಲ್ಲಿ 10 ಓವರ್ಗಳಲ್ಲಿ ಕೇವಲ 35 ರನ್ ನೀಡಿ 3 ವಿಕೆಟ್ ಪಡೆದ ಚಾಹಲ್, ಈ ಟೂರ್ನಿಯಲ್ಲಿ 21.00 ಸರಾಸರಿಯಲ್ಲಿ ವಿಕೆಟ್ ಬೇಟೆ ಮುಂದುವರಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ಚಾಹಲ್, ಈ ಪ್ರದರ್ಶನದ ಮೂಲಕ ಆಯ್ಕೆದಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.