
ದೇಶಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ 'ಸಾರ್ವಜನಿಕ ಪರೀಕ್ಷೆಗಳ (ಅನುಚಿತ ಮಾರ್ಗಗಳ ತಡೆ) ತಿದ್ದುಪಡಿ ಕಾಯ್ದೆ, 2026'ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ಈ ಕಾಯ್ದೆಯು UPSC, SSC, RRB ಮತ್ತು NTA ನಡೆಸುವ NEET ಸೇರಿದಂತೆ ಕೇಂದ್ರದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನ್ವಯವಾಗಲಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ.
ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವ ಗ್ಯಾಂಗ್ಗಳು ಮತ್ತು ಕೋಚಿಂಗ್ ಸೆಂಟರ್ಗಳಿಗೆ ಕಠಿಣ ಜೈಲು ಶಿಕ್ಷೆ ಹಾಗೂ ಕೋಟ್ಯಂತರ ರೂಪಾಯಿ ದಂಡ ವಿಧಿಸಲು ಹೊಸ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.