
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಡಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ನಡೆಸಿದ 37 ಗಂಟೆಗಳ ಸುದೀರ್ಘ ದಾಳಿ ಅಂತ್ಯಗೊಂಡಿದೆ.
ಸೆಪ್ಟೆಂಬರ್ 9ರ ಬೆಳಗ್ಗೆ 6 ಗಂಟೆಗೆ ಆರಂಭವಾದ ಈ ಕಾರ್ಯಾಚರಣೆಯು ಬೆಂಗಳೂರು ಮತ್ತು ಬೆಳಗಾವಿಯ 18 ಸ್ಥಳಗಳಲ್ಲಿ ನಡೆದಿದ್ದು, ಬೆಳಗಾವಿ ಮನೆಯಲ್ಲಿ 3 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.
ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಸತೀಶ್ ಜಾರಕಿಹೊಳಿ ಅವರಿಗೆ ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ ಸ್ಥಳದಿಂದ ತೆರಳಿದ್ದಾರೆ.