Education
ಚನ್ನಪಟ್ಟಣದ ಶಿಕ್ಷಕ ಯೋಗೇಶ್ ಚಕ್ಕೆರೆ ಹಾಗೂ ಹೇಮಲತಾ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್

ಚನ್ನಪಟ್ಟಣದ ಶಿಕ್ಷಕ ಯೋಗೇಶ್ ಚಕ್ಕೆರೆ ಹಾಗೂ ಹೇಮಲತಾ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್

prajavani54m
THE BRIEF
1

ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಚನ್ನಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ ಹಾಗೂ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಅವರಿಗೆ 'ನೇಷನ್ ಬಿಲ್ಡರ್ ಅವಾರ್ಡ್' ಲಭಿಸಿದೆ.

2

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ಹಾಗೂ ಸೃಜನಾತ್ಮಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿರುವ ಅವರ ಸೇವೆಯನ್ನು ಗುರುತಿಸಿ ರೋಟರಿ ಜಿಲ್ಲೆ 3191 ಬೇಸಿಕ್ ಎಜುಕೇಷನ್ ಅಂಡ್ ಲಿಟರಸಿ ವಿಭಾಗ ಈ ಪ್ರಶಸ್ತಿ ನೀಡಿದೆ.

3

ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನ ಡಾ.ಎಚ್.ಎನ್.ಮಲ್ಟಿಮೀಡಿಯಾ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರೊಂದಿಗೆ ಇಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.