
ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಚನ್ನಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ ಹಾಗೂ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಅವರಿಗೆ 'ನೇಷನ್ ಬಿಲ್ಡರ್ ಅವಾರ್ಡ್' ಲಭಿಸಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ ಹಾಗೂ ಸೃಜನಾತ್ಮಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿರುವ ಅವರ ಸೇವೆಯನ್ನು ಗುರುತಿಸಿ ರೋಟರಿ ಜಿಲ್ಲೆ 3191 ಬೇಸಿಕ್ ಎಜುಕೇಷನ್ ಅಂಡ್ ಲಿಟರಸಿ ವಿಭಾಗ ಈ ಪ್ರಶಸ್ತಿ ನೀಡಿದೆ.
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನ ಡಾ.ಎಚ್.ಎನ್.ಮಲ್ಟಿಮೀಡಿಯಾ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರೊಂದಿಗೆ ಇಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.