
ರಣಬೀರ್ ಕಪೂರ್ ಹಾಗೂ ಯಶ್ ನಟನೆಯ ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಎರಡನೇ ಭಾಗದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ವರದಿ ಆಗಿದೆ.
ಅಂದುಕೊಂಡ ಸಮಯಕ್ಕಿಂತ ಹೆಚ್ಚಿನ ಶೂಟಿಂಗ್ ಹಾಗೂ ಗ್ರಾಫಿಕ್ಸ್ ಕೆಲಸಗಳ ಅವಶ್ಯಕತೆ ಇರುವುದರಿಂದ ಮತ್ತು ಆಕ್ಷನ್ ದೃಶ್ಯಗಳ ಸಂಯೋಜನೆಗೆ ಸಮಯ ಬೇಕಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು 2027ರ ಬದಲು 2028ರ ದೀಪಾವಳಿಗೆ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.