
ಕರ್ನಾಟಕದಲ್ಲಿ ಅಕ್ಟೋಬರ್ 23 ಮತ್ತು 24ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ಯೆಲ್ಲೋ ಅಲರ್ಟ್ ಘೋಷಿಸಿದ್ದಾರೆ.
ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.