
ರಾಜ್ಯದಲ್ಲಿ ಮುಂಗಾರು ಮಳೆಯ ಅಭಾವದಿಂದ ಸಂಕಷ್ಟಕ್ಕೀಡಾಗಿರುವ ಹೆಚ್ಚುವರಿ 23 ತಾಲೂಕುಗಳನ್ನು ಬರಪೀಡಿತ ಎಂದು ಕಂದಾಯ ಇಲಾಖೆಯು ಸೆಪ್ಟೆಂಬರ್ 17 ರಂದು ಅಧಿಕೃತವಾಗಿ ಆದೇಶ ಹೊರಡಿಸಿದೆ.
ಕೆಎಸ್ಎನ್ಡಿಎಂಸಿ ವರದಿ ಹಾಗೂ ಗ್ರೌಂಡ್ ಟ್ರೂಥಿಂಗ್ ಆಧಾರದ ಮೇಲೆ ಘೋಷಿಸಲಾದ ಈ ತಾಲೂಕುಗಳಲ್ಲಿ 21 ತಾಲೂಕುಗಳು ತೀವ್ರ ಬರಪೀಡಿತ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲ್ಪಟ್ಟಿವೆ.
ಬರಪೀಡಿತ ತಾಲೂಕುಗಳಲ್ಲಿ ಸಾಲ ಮರುಪಾವತಿಗೆ ವಿನಾಯಿತಿ ಘೋಷಿಸಲಾಗಿದ್ದು, ಜಿಲ್ಲಾಧಿಕಾರಿಗಳು ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಪರಿಹಾರ ಮತ್ತು ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ಸೂಚಿಸಲಾಗಿದೆ.