
ರಾಜ್ಯದಲ್ಲಿ ಹೊಸ ಗೃಹಬಳಕೆ ಎಲ್‌ಪಿಜಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿರುವ 36 ಸಾವಿರಕ್ಕೂ ಹೆಚ್ಚು ಗ್ರಾಹಕರು ಇನ್ನೂ ಕಾಯುತ್ತಿದ್ದಾರೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಈ ಕುರಿತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿರುವ ಅವರು, ಬಾಕಿ ಇರುವ ಅರ್ಜಿಗಳನ್ನು ತಕ್ಷಣ ಅನುಮೋದಿಸುವಂತೆ ಮನವಿ ಮಾಡಿದ್ದಾರೆ.
ಕೇವಲ ಬೆಂಗಳೂರಿನಲ್ಲೇ ಹೊಸ ಎಲ್‌ಪಿಜಿ ಸಂಪರ್ಕಕ್ಕಾಗಿ 11 ಸಾವಿರಕ್ಕೂ ಹೆಚ್ಚು ಮಂದಿ ಕಾಯುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.