ತಿಂಗಳಿಗೆ 1,000 ರೂ. ಹೂಡಿಕೆ ಮಾಡಿದರೆ ಐಷಾರಾಮಿ ಬಹುಮಾನ ನೀಡುವುದಾಗಿ ಆಮಿಷವೊಡ್ಡಿ ರಾಜ್ಯದಾದ್ಯಂತ 500 ಕೋಟಿ ರೂ.ಗೂ ಅಧಿಕ ವಂಚನೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಈ ದಂಧೆಗೆ ಸಂಬಂಧಿಸಿದಂತೆ ಪ್ರಸ್ತುತ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ಬಿಐ ನಿಯಮಗಳನ್ನು ಗಾಳಿಗೆ ತೂರಿ ನಡೆಯುತ್ತಿದ್ದ ಈ ಸ್ಕೀಮ್ಗಳ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಗಂಭೀರ ಕ್ರಮದ ಎಚ್ಚರಿಕೆ ನೀಡಿದ್ದಾರೆ.