
ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೃತಕವಾಗಿ ತಯಾರಿಸುವ 'ಅನಲಾಗ್ ಪನ್ನೀರ್' ಬಳಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿದೆ.
ಅನಲಾಗ್ ಪನ್ನೀರ್ ತಯಾರಿಕೆಯಲ್ಲಿ ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ ಮತ್ತು ರಾಸಾಯನಿಕಗಳನ್ನು ಬಳಸುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದ್ದು, ಇದು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ.
ಇಲಾಖೆಯು ರಾಜ್ಯಾದ್ಯಂತ ದಾಳಿ ನಡೆಸಲು ಸಿದ್ಧತೆ ನಡೆಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.