
ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ವಿನಾಯಿತಿ ಪ್ರಶ್ನಿಸಿದ್ದ ಹಲವು ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದ್ದು, ಕರ್ನಾಟಕದ ಪ್ರಕರಣವನ್ನು ಮೊದಲಿಗೆ ವಿಚಾರಣೆ ನಡೆಸಲು ನಿರ್ಧರಿಸಿದೆ.
ಪತ್ನಿಯನ್ನು ಲೈಂಗಿಕ ಗುಲಾಮಳಂತೆ ನಡೆಸಿಕೊಂಡ ಆರೋಪದಡಿ ಪತಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಅವಕಾಶ ನೀಡಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದ ಅರ್ಜಿ ಇದಾಗಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರಿದ್ದ ಪೀಠವು ವೈವಾಹಿಕ ಅತ್ಯಾಚಾರಕ್ಕೆ ವಿನಾಯಿತಿ ಕುರಿತ ಸಾಂವಿಧಾನಿಕ ಸಿಂಧುತ್ವವನ್ನೂ ಪರಿಶೀಲಿಸಲಿದೆ.