
ಪಶು ವೈದ್ಯಾಧಿಕಾರಿ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇಮಕಾತಿಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನ ಕೆಪಿಎಸ್ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಪ್ರತಿಭಟನೆಯನ್ನು ನಿಯಂತ್ರಿಸಲು 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಚೇರಿಯ ಸುತ್ತ ಬ್ಯಾರಿಕೇಡ್ಗಳನ್ನು ಹಾಕಿ ಬಿಗಿ ಭದ್ರತೆ ಒದಗಿಸಲಾಗಿದೆ.
ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದು, ನೇಮಕಾತಿ ಅಕ್ರಮಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ.