
ಕರ್ನಾಟಕದಲ್ಲಿ ಪಡಿತರ ಚೀಟಿಗಳ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಆದಾಯ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸ್ಪಷ್ಟಪಡಿಸಿದೆ.
ಫಲಾನುಭವಿಗಳಿಗೆ ಅನುಕೂಲವಾಗಲು ತಿಂಗಳ ಕೊನೆಯವರೆಗೆ ಪ್ರತಿದಿನ ಬೆಳಿಗ್ಗೆ 7ರಿಂದ ರಾತ್ರಿ 10 ಗಂಟೆಯವರೆಗೆ ರಜೆ ಇಲ್ಲದೆ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಉಚಿತ ಅಕ್ಕಿ ಹಾಗೂ ಗೃಹಲಕ್ಷ್ಮಿ ಸೇರಿದಂತೆ ಇ、ತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ.