
ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠವು, ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಅಮಾನತು ಆದೇಶವನ್ನು ಮಂಗಳವಾರ ರದ್ದುಗೊಳಿಸಿದೆ.
ನ್ಯಾಯಾಲಯವು ಮುಂದಿನ ಏಳು ದಿನಗಳ ಒಳಗಾಗಿ ಸಾಹುಕಾರ್ ಅವರನ್ನು ಮರಳಿ ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅಮಾನತು ರದ್ದಾದರೂ, ಸಾಹುಕಾರ್ ಅವರು ತಮ್ಮ ಪುತ್ರಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾಗದಂತೆ ಕೋರ್ಟ್ ಷರತ್ತು ವಿಧಿಸಿದ್ದು, ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು 26 ಗಂಟೆಗಳಿಂದ ಶೋಧ ನಡೆಸುತ್ತಿದ್ದಾರೆ.