
ಬಿಜೆಪಿ ನಾಯಕರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಕಿಡಿಕಾರಿದ್ದಾರೆ.
ವಂದೇ ಮಾತರಂ ವಿಚಾರವಾಗಿ ಬಿಜೆಪಿ ಹೋರಾಟಕ್ಕೆ ಕರೆ ನೀಡಿರುವ ಕುರಿತು ಮಾತನಾಡಿದ ಅವರು, ಎಲ್ಲದರಲ್ಲೂ ತಪ್ಪು ಕಂಡುಹಿಡಿಯುವ ಪ್ರವೃತ್ತಿ ಅವರದ್ದು ಎಂದರು.
ಮಳೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಆತಂಕಪಡುವ ಅಗತ್ಯವಿಲ್ಲವೆಂದ ಸಿಎಂ, ಕುಡಿಯುವ ನೀರು ಪೂರೈಕೆಗೆ ವಿಶೇಷ ಅಧಿವೇಶನ ಕರೆಯಲಾಗುವುದು ಎಂದರು.