
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು.
ಈ ಸಂಬಂಧ ಮಾರ್ಚ್ 25ರಂದು ಸೋಮಣ್ಣ ಸಲ್ಲಿಸಿದ್ದ ಮನವಿಯನ್ನು ಗೃಹ ಸಚಿವಾಲಯವು ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿ (ORGI) ಗೆ ರವಾನಿಸಿದ್ದು, ORGI ಪ್ರಸ್ತಾವನೆಯನ್ನು ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಕಳುಹಿಸಿದೆ.
ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಈ ಸಮುದಾಯಕ್ಕೆ ಸಂವಿಧಾನದ ಆಶಯದಂತೆ ನ್ಯಾಯ ದೊರೆಯಲಿದೆ ಎಂದು ಸೋಮಣ್ಣ ತಿಳಿಸಿದರು.