
ಬೆಂಗಳೂರಿನಾದ್ಯಂತ ಅಕ್ಟೋಬರ್ 05ರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಡಿದ್ದಾರೆ.
ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕೆ.ಆರ್. ಮಾರ್ಕೆಟ್, ಶಾಂತಿನಗರ ಹಾಗೂ ಆನೇಕಲ್ನ ಅತ್ತಿಬೆಲೆ ಮತ್ತು ಜಿಗಣಿ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಪ್ರಮುಖವಾಗಿ ಕೆ.ಆರ್. ಮಾರ್ಕೆಟ್ ಪ್ರದೇಶದ ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿದಿದ್ದರಿಂದ ಪಾದಚಾರಿಗಳು ಸಂಕಷ್ಟಕ್ಕೆ ಸಿಲುಕಿದರು.