
ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಬದರಿನಾಥ ಧಾಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು.
ಚಾರ್ ಧಾಮ್ ಯಾತ್ರೆಯ ಮೊದಲ ಹಂತದಲ್ಲಿ ಮಳೆಗಾಲಕ್ಕೂ ಮುನ್ನವೇ 51 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ತಿಳಿಸಿದರು.
ಮಳೆಗಾಲದ ಬಳಿಕ ಆರಂಭವಾಗಿರುವ ಯಾತ್ರೆಯ ಎರಡನೇ ಹಂತದಲ್ಲಿ ಭಕ್ತರಿಗೆ ಸುಲಭ ದರ್ಶನ ಹಾಗೂ ಸೌಲಭ್ಯ ಕಲ್ಪಿಸಲು ಆಡಳಿತ ಮಂಡಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.