
ಬೆಂಗಳೂರಿನ ಜ್ಞಾನಭಾರತಿ ವ್ಯಾಪ್ತಿಯ ಸೋಣೇನಹಳ್ಳಿ ಸರ್ಕಲ್ ಸಮೀಪದ ಖಾಲಿ ಜಾಗದಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಜ್ಞಾನಭಾರತಿ ಠಾಣೆ ಪೊಲೀಸರು ಇದು ಡೈನಮೈಟ್ ಆಗಿರಬಹುದು ಎಂದು ಶಂಕಿಸಿದ್ದಾರೆ.
ಈ ಸ್ಫೋಟಕ ವಸ್ತುವಿನ ಮೂಲವನ್ನು ಪತ್ತೆಹಚ್ಚಲು ಮತ್ತು ಇದನ್ನು ಇಲ್ಲಿ ಯಾರು ಇರಿಸಿದ್ದಾರೆ ಎಂಬ ಬಗ್ಗೆ ತೀವ್ರ ತನಿಖೆ ಕೈಗೊಳ್ಳಲಾಗಿದೆ.